Online Application for Post-Matric Hostel Admissions for the Year 2024-25

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ.ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ಪಿ.ಯು.ಸಿ ಮತ್ತು ಪಿ.ಯು ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ- 1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

WhatsApp Group Join Now
Telegram Group Join Now

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ

▶ಪ್ರವರ್ಗ-1, ಎಸ್.ಸಿ & ಎಸ್.ಟಿ- ರೂ.2.50 ಲಕ್ಷ

▶ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ: ರೂ.1.00 ಲಕ್ಷ

▶ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್ಸೈಟ್ ಅನ್ನು ಸಂಪರ್ಕಿಸಿ ಆನ್ಲೈನ್ ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 20.07.2024.

ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ಅನ್ನು ನೋಡಬಹುದು.

▶ ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು.

ಸಂಪರ್ಕಿಸಬಹುದಾದ ಸಹಾಯವಾಣಿ ಸಂಖ್ಯೆ 8050770004 ಮತ್ತು 8050770005

CLICK HERE TO DOWNLOAD INFORMATION

ಇದನ್ನೂ ನೋಡಿ……

ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಅರ್ಜಿ & ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.

WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!